
ಬೆಂಗಳೂರಿನಲ್ಲಿ 917 ಕಡೆ ಪೊಲೀಸರ ದಾಳಿ, 71 ಮಕ್ಕಳು ರಕ್ಷಣೆ
The story in brief
ಬೆಂಗಳೂರಿನ 917 ಕಡೆ ಪೊಲೀಸರು ದಿಢೀರ್ ದಾಳಿ ನಡೆಸಿ ಪಶ್ಚಿಮ ಬೆಂಗಳೂರು ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 71ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ರಕ್ಷಣೆ ಮಾಡಲಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕಠಿಣ ಕಾರ್ಯಾಚರಣೆ ಮುಂದುವರೆಯಲಿದೆ.