
ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಕಿತ್ತುಹಾಕಲಾಗಿದೆ
The story in brief
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯನವರ 9 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲಾಗಿತ್ತು. ಆದರೆ ಅಧಿಕಾರಿಗಳು ಕೂಡಲೇ ಅದನ್ನು ಕಿತ್ತುಹಾಕಿದ್ದಾರೆ. ಅಭಿಮಾನಿಗಳು ಹಾಗೂ ಕುರುಬ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದು, ಎರಡು ದಿನಗಳಲ್ಲಿ ಪ್ರತಿಮೆ ಮರುಸ್ಥಾಪಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕುರುಬ ಸಂಘ ಬೆದರಿಕೆ ಹಾಕಿದೆ.