
ಜಯನಗರದಲ್ಲಿ 20ರಂದು ವೀರ ಲೋಕ ಪುಸ್ತಕ ಮೇಳ ಆರಂಭ
The story in brief
ವೀರ ಲೋಕ ಪ್ರಕಾಶನಸಂಘದ ವತಿಯಿಂದ ಜಯನಗರದ ಶಾಲಿನಿ ಮೈದಾನದಲ್ಲಿ 20ರಿಂದ 22ರವರೆಗೆ ವೀರ ಲೋಕ ಪುಸ್ತಕ ಮೇಳ ನಡೆಯಲಿದೆ. 100ಕ್ಕೂ ಹೆಚ್ಚು ಪ್ರಕಾಶಕರು ಭಾಗವಹಿಸಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಿದ್ದಾರೆ. ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ ತೆರೆದಿರುವ ಈ ಮೇಳದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ. 3 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಲಿದ್ದು, 3 ಕೋಟಿಗೂ ಹೆಚ್ಚು ವಹಿವಾಟು ನಡೆಯಲಿದೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.